ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 2-3 ದಿನಗಳ ಕಾಲ ರಾಜ್ಯದ ಕೆಲವೆಡೆ ತಾಪಮಾನ ಕುಸಿಯಲಿದ್ದು, ಚಳಿ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಒಳಹವೆ ಇರಲಿದೆ ಎಂದು ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
WEATHER |ಇನ್ನೆರಡು ದಿನ ಭಾರೀ ಚಳಿ, ಅಲ್ಲಲ್ಲಿ ಮಳೆಯೂ ಬರಲಿದೆಯಂತೆ

