ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ರಾಜಧಾನಿ ಈಗ ಸಖತ್ ಕೂಲ್ ಆಗಿದ್ದು, ರಾಜ್ಯದ ಇತರೆ ಜಿಲ್ಲೆಗಳು ಕೂಡ ಚಳಿಗಾಳಿಗೆ ತತ್ತರಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಂಜೆಯ ಹೊತ್ತಿಗೆ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, 5 ದಿನ ಚಳಿಯೊಂದಿಗೆ ಮೋಡ ಕವಿದ ವಾತಾವರಣವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾಂಡೌಸ್ ಚಂಡಮಾರುತ ಪ್ರಭಾವದಿಂದ ದಕ್ಷಿಣ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮಳೆ, ಚಳಿ ಮುಂದುವರಿಯುವ ಬಗ್ಗೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಕರಾವಳಿಯ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ 6 ಎಂಎಂ ಮಳೆಯಾಗುವ ಸಾಧ್ಯತೆಯಿದೆ.