ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಡೆಯೋದಕ್ಕೆ ಸರ್ಕಾರ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಲಂಚ ಕೊಡಬೇಡಿ ಎನ್ನುವ ಫಲಕಗಳನ್ನು ಅವಳಡಿಸುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೂಚನೆ ನೀಡಿದ್ದು, ಸೂಚನೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಸಮಸ್ಯೆಯನ್ನು ತಡೆಯಲು ಹಾಗೂ ಪಾರದರ್ಶಕತೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಲಂಚ ಕೊಡಬೇಡಿ ಫಲಕ ಅಳವಡಿಕೆ ಕಡ್ಡಾಯವಾಗಿದ್ದು, ಫಲಕದಲ್ಲಿ ಯಾವುದೇ ಸರ್ಕಾರಿ ನೌಕರ ಲಂಚ ಕೇಳಿದರೆ ಏನು ಮಾಡಬೇಕು ಎಂಬ ಮಾಹಿತಿ, ಲೋಕಾಯುಕ್ತದ ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಬೇಕೆಂದು ಸೂಚನೆ ನೀಡಿದ್ದಾರೆ. ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಬೋರ್ಡ್ ಇರಲಿದ್ದು, ಯಾರೇ ಲಂಚ ಕೇಳಿದರೂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.



