ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಹುತೇಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 12 ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.