ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ಸರ್ಕ್ಯೂಲೇಷನ್ ಇದ್ದು, ಮುಂದಿನ 5 ದಿನ ಕರ್ನಾಟಕಕ್ಕೆ ಮಳೆ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.
ಆ.23, 24, 25 ರಂದು ಕರಾವಳಿ ಜಿಲ್ಲೆಗಳಿಗೆ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಕರಾವಳಿ ಜಿಲ್ಲೆಗಳಿಗೆ ಆ.23, 24, 25 ರಂದು ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಕೂಡ ಹಗುರದ ಮಳೆಯಾಗಲಿದೆ. ಹಲವು ಕಡೆ ಜೋರು ಮಳೆ ಆಗಲಿದ್ದು, ಸದ್ಯ ಯಾವುದೇ ಅರ್ಲಟ್ ನೀಡಿಲ್ಲ