ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ರಾಜ್ಯದ ಹಿತ ನೋಡಿ ಮಾತನಾಡಲಿ, ರಾಜ್ಯದ ಹಿತದೃಷ್ಟಿಯಿಂದ ಸಿಎಂ ರನ್ನ ಭೇಟಿ ಮಾಡಿ ಮಾತನಾಡಿದ್ರೆ ಒಳ್ಳೆಯದು ಎಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ರಾಜ್ಯ ಸರ್ಕಾರದ ಸಹಕಾರ ಸಿಗುತ್ತಿಲ್ಲ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದರು. ನಾನು ನಮ್ಮ ಅಧಿಕಾರಿಗಳ ಜೊತೆ ಹೋಗಿ ದೆಹಲಿಯಲ್ಲಿ ಅವರನ್ನು ಭೇಟಿ ಮಾಡಿದ್ದೇನೆ. ಕೆಲವು ಸೆಮಿ ಕಂಡಕ್ಟರ್ ಸೇರಿದಂತೆ ಸಾಕಷ್ಟು ವಿಚಾರಗಳಲ್ಲಿ ಸಹಾಯ ಮಾಡುವಂತೆ ಮನವಿ ಮಾಡಿದ್ದೇವೆ. ಯಾರೂ ಭೇಟಿ ಮಾಡಿಲ್ಲ ಅನ್ನೋದು ಸುಳ್ಳು. ನಾನು ಕೈಗಾರಿಕಾ ಸಚಿವನಾಗಿ ಭೇಟಿ ಮಾಡಿ ಸಾಕಷ್ಟು ಮನವಿ ಕೊಟ್ಟಿದ್ದೇನೆ ಎಂದು ಹೇಳಿದರು.