ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಅವರು ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಟ್ಟರೆ ಉತ್ತಮ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಪಕ್ಷದ ಕಾಲ ಮುಗಿಯಿತು ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶಿವಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಕೂಡ ನಿಗಮ ಮಂಡಳಿಗಳಲ್ಲಿ ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡುವ ಯೋಗ್ಯತೆ ಇಲ್ಲ. ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಸಿ ಎಂದು ಕಿಡಿಕಾರಿದ್ದಾರೆ.