Monday, September 25, 2023

Latest Posts

ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿದ ಇಟಲಿ ಪ್ರಧಾನಿ ಜಾರ್ಜಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ಮತ್ತು10 ರಂದು ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಇಂದು ನವದೆಹಲಿಗೆ ಆಗಮಿಸಿದ್ದಾರೆ.

ದೆಲಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ವಾಗತಿಸಿದರು.

ರಾಷ್ಟ್ರ ರಾಜಧಾನಿಯ ಪ್ರಗತಿ ಮೈದಾನದಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಭಾರತ್ ಮಂಟಪದಲ್ಲಿ ಜಿ20 ಶೃಂಗಸಭೆ ನಡೆಯುತ್ತಿದೆ. ಭಾರತದ ಅಧ್ಯಕ್ಷತೆಯಲ್ಲಿ ಇದೇ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆಯುತ್ತಿದ್ದು, ಹೆಚ್ಚು ಮಹತ್ವ ಪಡೆದುಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!