ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾರತೀಯ ಜನತೆಗೆ ಸ್ವಾತಂತ್ರ್ಯ ದಿನದಂದು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
“ಇಟಲಿ ಮತ್ತು ಭಾರತವು ಎಂದಿಗೂ ಬಲವಾದ ಬಾಂಧವ್ಯವನ್ನು ಹಂಚಿಕೊಳ್ಳುತ್ತದೆ ಮತ್ತು ನಾವು ಒಟ್ಟಿಗೆ ಉತ್ತಮವಾದುದನ್ನು ಸಾಧಿಸುತ್ತೇವೆ ಎಂದು ನನಗೆ ವಿಶ್ವಾಸವಿದೆ. ನಮ್ಮ ಕಾರ್ಯತಂತ್ರದ ಪಾಲುದಾರಿಕೆಯು ಭವಿಷ್ಯದ ಪ್ರಮುಖ ಆಧಾರಸ್ತಂಭವಾಗಿದೆ, ”ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಮೆಲೋನಿ ಹೇಳಿದ್ದಾರೆ