ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)ನಲ್ಲಿ 125 ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಸಂದರ್ಶನ ನಡೆಸಲಾಗುತ್ತಿದೆ.
10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಆಗಸ್ಟ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತವನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 8,2023ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.