ದಿಗಂತ ವರದಿ ಹುಬ್ಬಳ್ಳಿ:
ದೇಶದಲ್ಲಿ ಅಹಿಂದ ನಾಯಕರ ತುಳಿಯಲು ಬಿಜೆಪಿ ಕುತಂತ್ರ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸಂಚು ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎನ್ನುವ ಬಿಜೆಪಿ ನಾಯಕರು ಪ್ರಶ್ನೆ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡುತ್ತಾರಾ ಎಂದರು.
ಹಾಗೇನಾದರೂ ಇದ್ದರೆ ಪ್ರಾಧಾನಿ ಮೋದಿ ಮೊದಲು ರಾಜೀನಾಮೆ ನೀಡಬೇಕು. ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ಉಪಯೋಗಿಸಿಕೊಂಡು ಸಿದ್ದರಾಮಯ್ಯ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೊಂದರೆ ನೀಡುವುದು, ಸರ್ಕಾರದ ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಹೊರಟ್ಟಿದ್ದಾರೆ. ಆದರೆ ಹಿಂದೂಳಿದ ಹಾಗೂ ಶೋಷಿತ ಜನರು ಅವರ ಪರವಾಗಿ ಇದ್ದಾರೆ. ಸಿದ್ದರಾಮಯ್ಯ ಅವರ ಜನಪ್ರಿಯತೆ ಬಿಜೆಪಿ ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಏಕೆ ನೀಡಬೇಕು. ಪ್ರಧಾನಿ ಮೋದಿ ಅವರು ಗುಜರಾತ್ ನಲ್ಲಿ ನಿವೇಶ ಪಡೆದಿದ್ದರೂ. ಈಗ ಮರಳಿ ನೀಡಿದ್ದಾರೆ. ಬಿಜೆಪಿ ಅವರೇ ನಿವೇಶ ನೀಡಿದ್ದಾರೆ. ಕಾನೂನು ಬಾಹಿರವಾಗಿ ನಿವೇಶನ ನೀಡಿದ್ದೇವೆ ಎಂದು ಬಿಜೆಪಿ ನಾಕರು ಹೇಳಿಕೊಳ್ಳಲಿ. ಹಾಗಿದ್ದರೆ ಬಿಜೆಪಿ ಅವರು ನೀಡಿದ ೧೨೫ ನಿವೇಶನ ಕಾನೂನು ಬಾಹಿರಾನಾ ಎಂದು ಪ್ರಶ್ನಿಸಿದ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.