ವಿಶ್ವಕಪ್ ಹೀರೋ ಕಪಿಲ್ ದೇವ್‌ಗೆ ಇಂದು ಜನ್ಮದಿನದ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ವಿಶ್ವಕಪ್ ಹೀರೋ ಕಪಿಲ್ ದೇವ್‌ಗೆ ಇಂದು ಜನ್ಮದಿನದ ಸಂಭ್ರಮ.
ಭಾರತೀಯ ಕ್ರಿಕೆಟ್ ತಂಡಕ್ಕೆ ಮೊಟ್ಟಮೊದಲ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ಟೀಂ ಇಂಡಿಯಾ ಕ್ಯಾಪ್ಟನ್ ಇಂದು 63 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಗಣ್ಯರು ಹರಿಯಾಣ ಹರಿಕೇನ್ ಖ್ಯಾತಿಯ ಕಪಿಲ್ ದೇವ್ ಅವರಿಗೆ ಜನ್ಮ ದಿನದ ಶುಭ ಕೋರಿದ್ದಾರೆ.
ತಮ್ಮ 19 ನೇ ವಯಸ್ಸಿನಲ್ಲಿಯೇ ಭಾರತದ 25 ನೇ ಕ್ರಿಕೆಟರ್ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.
ಆಗಿನ ಕಾಲಕ್ಕೆ ದಿಗ್ಗಜ ಕ್ರಿಕೆಟರ್‌ಗಳನ್ನು ಹೊಂದಿದ್ದ ವೆಸ್ಟ್ ಇಂಡೀಸ್ ತಂಡವನ್ನು ವಿಶ್ವಕಪ್‌ನಲ್ಲಿ ಮಣಿಸಿದ್ದು ಸ್ಮರಣೀಯವಾಗಿದೆ. ಕ್ರಿಕೆಟ್‌ನಲ್ಲಿ ವೆಸ್ಟ್ ಇಂಡೀಸ್ ಅಧಿಪತ್ಯ ಸಾಧಿಸಿದ್ದ ಸಮಯಕ್ಕೆ ಭಾರತೀಯ ಕ್ರಿಕೆಟ್ ಸಮನಾಗಿರಲಿಲ್ಲ. ಇಂಥ ಸಂದರ್ಭದಲ್ಲಿಯೂ ಕಪಿಲ್ ದೇವ್ ನಾಯಕತ್ವದ ತಂಡ ಬಲಿಷ್ಠ ವಿಂಡೀಸ್‌ನನ್ನು ಸೋಲಿಸಿ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!