Tuesday, March 28, 2023

Latest Posts

ಇದೊಂದು ನನ್ನ ಸುದೀರ್ಘ ಪ್ರಯಾಣ: ಮನದಾಳದ ಮಾತುಗಳನ್ನಾಡಿದ ವಿರಾಟ್​ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

100 ಟೆಸ್ಟ್ ಪಂದ್ಯಗಳನ್ನು ಆಡುವ ಬಗ್ಗೆ ನಾನೆಂದೂ ಯೋಚಿಸಿರಲಿಲ್ಲ. ಇದೊಂದು ಸುದೀರ್ಘ ಪ್ರಯಾಣ ಎಂದು ವಿರಾಟ್​ ಕೊಹ್ಲಿ ತಮ್ಮ ಮನದಾಳದ ಮಾತುಗಳನ್ನಾಡಿದ್ದಾರೆ.
ಶುಕ್ರವಾರದಿಂದ ಶ್ರೀಲಂಕಾ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಪಂದ್ಯ ಕೊಹ್ಲಿ ಪಾಲಿಗೆ ಅಚ್ಚರಿಯ ನೆನಪಿಡುವ ಪಂದ್ಯ. ಕಾರಣ ಅವರ ಜೀವನದ 100ನೇ ಟೆಸ್ಟ್​ ಪಂದ್ಯವನ್ನಾಡಲಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಆ 100 ಟೆಸ್ಟ್ ಪಂದ್ಯಗಳನ್ನು ಆಡುವ ಅವಧಿಯಲ್ಲಿ ನಾವು ಸಾಕಷ್ಟು ಕ್ರಿಕೆಟ್ ಆಡಿದ್ದೇವೆ. ಅದರಲ್ಲಿ ಸಾಕಷ್ಟು ಅಂತಾರಾಷ್ಟ್ರೀಯ ಕ್ರಿಕೆಟ್ ಕೂಡ ಇದೆ. ನಾನು 100 ಟೆಸ್ಟ್​ ಪಂದ್ಯಗಳನ್ನು ಆಡಲು ಸಾಧ್ಯವಾಗಿದ್ದಕ್ಕೆ ಕೃತಜ್ಞನಾಗಿರುತ್ತೇನೆಎಂದು ಬಿಸಿಸಿಐ ಟ್ವಿಟರ್​ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಹೇಳಿದರು.
2011ರಲ್ಲಿ ವೆಸ್ಟ್​ ಇಂಡೀಸ್ ವಿರುದ್ಧ ತಮ್ಮ ಮೊದಲ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಕೊಹ್ಲಿ, ದಶಕದ ಸುದೀರ್ಘ ಪಯಣದಲ್ಲಿ 50.39ರ ಸರಾಸರಿಯಲ್ಲಿ 7,962 ರನ್​ಗಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!