ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಯಿ ಮಾಂಸ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕೃತ ರಿಪೋರ್ಟ್ ಅನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ (FSL) ಆಯುಕ್ತ ಕೆ ಶ್ರೀನಿವಾಸ್ ಅವರು ಆಹಾರ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ವರದಿ ಸಲ್ಲಿಸಿದ್ದಾರೆ.
ರಾಜಸ್ಥಾನದಿಂದ ಬೆಂಗಳೂರಿಗೆ ಮಾರಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಆಹಾರ ಮತ್ತು ಗುಣಮಟ್ಟ ಆಯುಕ್ತಾಲಯ ವರದಿ ನೀಡಿದೆ. ಹೈದ್ರಾಬಾದ್ ಐಸಿಎಆರ್ ರಿಪೋರ್ಟ್ ಗುಣಮಟ್ಟ ಇಲಾಖೆ ಈ ವರದಿ ನೀಡಿದೆ. ಐಸಿಎಆರ್ ರಿಪೋರ್ಟ್‌ಲ್ಲಿ ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ವರದಿಯಾಗಿದೆ. ಸ್ಯಾಂಪಲ್ ಪರಿಶೀಲಿಸಿ ಐಸಿಎಆರ್ ವರದಿ ನೀಡಿದೆ.
ಈ ಕುರಿತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಮಾತನಾಡಿ, ಕುರಿ ಮಾಂಸ ಎಂದು ವರದಿ ಬಂದಿದೆ. ಪ್ರಾಥಮಿಕ ಹಂತದಲ್ಲಿ 9 ಜನರಿಗೆ ಲೈಸೆನ್ಸ್ ಪಡೆದಿದ್ದರು ಎಂಬ ಹಿನ್ನೆಲೆ ನೋಟಿಸ್ ನೀಡಿ ವಿಚಾರಣೆ ಮಾಡಲಾಯಿತು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಲೈಸೆನ್ಸ್ ಇದೆ. ಹೀಗಾಗಿ ರಾಜಸ್ಥಾನದಿಂದ ಕುರಿ ತಂದು ಮಾರಾಟ ಮಾಡುತ್ತಿದ್ದರು. ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಸ್ಪಷ್ಟನೆ ನೀಡಿದರು.
ಇನ್ನು ನಾಯಿ ಮಾಂಸ ಎಂದು ವದಂತಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ಅವರ ಮೇಲೆ ಕ್ರಮ ಕೈಗೊಳ್ಳುತ್ತದೆ. ನಾವು ಪೊಲೀಸರಿಗೆ ವರದಿ ನೀಡುತ್ತೇವೆ. ವದಂತಿ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದರು.