ನಾನು ಒಮ್ಮೆ ಮಾತು ಕೊಟ್ಟರೆ ತಪ್ಪಲ್ಲ…ಸರ್ಕಾರ ಯಾವ ಗ್ಯಾರಂಟಿ ನಿಲ್ಲಿಸಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇವೇಗೌಡರು ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೊಡ್ಡ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.

ಮೊದಲ ಬಾರಿ ಸಿಎಂ ಆಗಿ ಹತ್ತು ಹಲವು ಭಾಗ್ಯಗಳನ್ನು ನೀಡಿದೆ. ಎರಡನೇ ಬಾರಿ ಸಿಎಂ ಆಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿ ರಾಜ್ಯದ ಜನತೆಯ ಎದುರಿಗೆ ಇಟ್ಟಿದ್ದೀವಿ. ಹೆಚ್ ಡಿ ಕುಮಾರಸ್ವಾಮಿ ಅವರೇ, ನೀವು ಏನು ಸಾಧನೆ ಮಾಡಿದ್ದೀರಿ? ಚನ್ನಪಟ್ಟಣ ಜನತೆಯ ಎದುರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ? 400 ಕೋಟಿ ವೆಚ್ಚದ ಹಾಲಿನ ಪುಡಿ ಘಟಕ ಮಾಡಿದ್ದು ನಾವು. ಕನಕಪುರದಲ್ಲಿ 2016 ರಲ್ಲಿ ಡೈರಿ ಸಂಕೀರ್ಣವನ್ನು 700 ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದು ನಾವು. ಇಂಥವು ಇನ್ನೂ ಪಟ್ಟಿ ದೊಡ್ಡದಿದೆ. ಕುಮಾರಸ್ವಾಮಿ ಅವರು ಇಂಥಾ ಒಂದೇ ಒಂದನ್ನು ಮಾಡಿದ್ದಾರಾ ಹೇಳಿ ದೇವೇಗೌಡರೇ . ಇದನ್ನು ಚನ್ನಪಟ್ಟಣ ಜನತೆ ಕೂಡ ಕೇಳಬೇಕು.

ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ನಿಂತು ಮತ ಕೇಳ್ತಿದ್ರಾ ? ಎನ್ ಡಿಎ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಇದ್ದು ಮತ ಕೇಳ್ತಿದ್ರಾ? ಇರಲಿ, ಚನ್ನಪಟ್ಟಣಕ್ಕೆ ಏನು ಮಾಡಿದ್ದೀರಿ ಎನ್ನುವುದನ್ನು ಕ್ಷೇತ್ರದ ಜನತೆ ಕೇಳಬೇಕು. ಬರೀ ಕಣ್ಣೀರು ಹಾಕೋದಲ್ಲ. ಅತ್ಯಾಚಾರಕ್ಕೆ ಒಳಗಾದ ಹಾಸನದ ಹೆಣ್ಣುಮಕ್ಕಳ ಪರವಾಗಿ ಪಾಪ ದೇವೇಗೌಡರಿಗೆ ಕಣ್ಣೀರೇ ಬರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!