ಸ್ವೆಟರ್‌ಗಳನ್ನೆಲ್ಲ ಹೊರಗೆ ತೆಗೆಯೋ ಟೈಮ್‌ ಬಂತು, ರಾಜ್ಯಾದ್ಯಂತ ತಾಪಮಾನ ಇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಚಳಿಯ ವಾತಾವರಣ ಆರಂಭವಾಗಿದ್ದು, ಇಂದು ಬೆಳಗಿನ ಜಾವ ಗಂಟೆ ಏಳಾದರೂ ಸ್ವಲ್ಪವೂ ಬಿಸಿಲು ಕಾಣಿಸಿಲ್ಲ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆಯಾಗಿದ್ದು, ಮೂಲೆಯಲ್ಲಿಟ್ಟಿದ್ದ ಸ್ವೆಟರ್‌ಗಳನ್ನೆಲ್ಲ ಹೊರಗೆ ತೆಗೆಯುವ ಸಮಯ ಬಂದಾಗಿದೆ.

ಡಿಸೆಂಬರ್​ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ​ನಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟಿಗ್ರೆಡ್​ಗಿಂತ ಕಳೆಗೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್​, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್​ವರಗೂ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇನ್ನು, ಮಂಗಳೂರಿನಲ್ಲಿ ಗರಿಷ್ಠ 33, ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್​ನಷ್ಟು ತಪಾಮಾನ ವರದಿಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!