September 27, 2026
Sunday, September 27, 2026
spot_img

ತುಂಬಾ ತಡವಾಯಿತು…ಇನ್ನು ಇರಾನ್ ಜೊತೆ ಮಾತುಕತೆ ಇಲ್ಲ ಎಂದ ಡೊನಾಲ್ಡ್ ಟ್ರಂಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಜೊತೆ ಮಾತುಕತೆ ಪುನರಾರಂಭಿಸಲು ‘ತುಂಬಾ ತಡವಾಯಿತು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ.

ಇರಾನ್ ವಾಯುಪಡೆ, ನೌಕಾಪಡೆ ಮತ್ತು ನಾಯಕತ್ವ ಕಳೆದು ಹೋಗಿದೆ. ಅವರು ಮಾತನಾಡಲು ಬಯಸುತ್ತಾರೆ. ಆದರೆ ಈಗಾಗಲೇ ‘ತುಂಬಾ ತಡವಾಗಿದೆ’ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಖಮೇನಿ ಅವರ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಅವರು ANIಗೆ ನೀಡಿದ ಸಂದರ್ಶನದಲ್ಲಿ “ಇರಾನ್ ಮಾತುಕತೆಗೆ ಸಿದ್ಧವಾಗಿದೆ. ಆದರೆ ಘನತೆಯಿಂದ ಕೂಡಿರಬೇಕು” ಎಂದು ಹೇಳಿದ್ದರು. ಅವರ ಈ ಹೇಳಿಕೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರ ಪ್ರತಿಕ್ರಿಯೆ ಹೊರ ಬಿದ್ದಿದೆ.

Must Read