ಐವನ್ ಡಿಸೋಜಾ ಪ್ರಚೋದನಾಕಾರಿ ಹೇಳಿಕೆ: ದೂರು ದಾಖಲಿಸಲು ಪೊಲೀಸರು ಹಿಂದೇಟು?

ಹೊಸದಿಗಂತ ವರದಿ, ಮಂಗಳೂರು:

ಕರ್ನಾಟಕ ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡುವುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಮಂಗಳೂರಿನ ಪೊಲೀಸರು ದೂರು ದಾಖಲಿಸಿಲು ಹಿಂದೇಟು ಹಾಕಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ನಗರದ ಬರ್ಕೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು ಇಲ್ಲವಾದರೆ ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಲಿದೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಐವನ್ ಡಿಸೋಜ್ ನೀಡಿದ್ದರು.

ಈ ಪ್ರಚೋದನಾತ್ಮಕ ಹೇಳಿಕೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಾ ಮೋರ್ಚಾ ಕಾರ್ಯಕರ್ತರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ಪೊಲೀಸರ ನಡೆ ವಿರುದ್ಧ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!