ಜ. 22ರಂದು ಸರ್ಕಾರಿ ರಜೆ ಘೋಷಣೆಗೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನವರಿ 22 ರಂದು ರಜೆ ನೀಡಬೇಕೆಂಬ ಬಿಜೆಪಿಯ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ , ಮನವಿ ಪತ್ರವನ್ನು ಇನ್ನೂ ನೋಡಿಲ್ಲ. ನೋಡುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ರಾಮ ಪ್ರಾಣ ಪ್ರತಿಷ್ಠಾಪನೆ ದಿನದಿಂದು ರಾಜ್ಯದಲ್ಲಿ ರಜೆ ನೀಡಬೇಕೆಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡಾ ಇದೇ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಅಯೋಧ್ಯೆಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ,‘ಇನ್ನೊಂದು ದಿನ ಅಲ್ಲಿಗೆ ಹೋಗುತ್ತೇನೆ ಎಂದು ಮೊದಲೇ ಹೇಳಿದ್ದೇನೆ. ನೀವು ಈ ಪ್ರಶ್ನೆಯನ್ನು ಏಕೆ ಪುನರಾವರ್ತಿಸುತ್ತೀರಿ’ ಎಂದು ಸುದ್ದಿಗಾರರನ್ನು ಕೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!