ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ(Ayodhya)ಯ ರಾಮ ಮಂದಿರ(Ram Mandir)ದ ಪ್ರಾಣಪ್ರತಿಷ್ಠೆಯಂದು ಸಾರ್ವಜನಿಕ ರಜೆ ಘೋಷಿಸಿರುವ ಮಹಾರಾಷ್ಟ್ರದ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಜನವರಿ 22ರಂದು ಸರ್ಕಾರವು ಸಾರ್ವಜನಿಕ ರಜೆಯನ್ನು ಘೋಷಿಸಿತ್ತು. ಈ ಅಧಿಸೂಚನೆ ವಿರುದ್ಧ ನಾಲ್ವರು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಜಿಎಸ್ ಕುಲಕರ್ಣಿ ಮತ್ತು ನ್ಯಾ. ನೀಲಾ ಗೋಖಲೆ ಅವರಿದ್ದ ವಿಶೇಷ ಪೀಠವು ಈ ತೀರ್ಪು ನೀಡಿದೆ. ವಿಶೇಷ ಸಂದರ್ಭಗಳಲ್ಲಿ ಸರ್ಕಾರವು ಸಾರ್ವಜನಿಕ ರಜಾದಿನಗಳನ್ನು ಘೋಷಿಸಿದ ಅನೇಕ ಉದಾಹರಣೆಗಳಿವೆ ಎಂದು ಪೀಠ ಹೇಳಿದೆ.
ಕೇರಳ ಹೈಕೋರ್ಟ್‌ನ ತೀರ್ಪಿನ ಉದಾಹರಣೆಯನ್ನು ಉಲ್ಲೇಖಿಸಿದ ಹೈಕೋರ್ಟ್, ಕೇರಳದಲ್ಲಿ ರಂಜಾನ್ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವುದನ್ನು ವಿರೋಧಿಸಿ ಅರ್ಜಿ ಸಲ್ಲಿಸಿದಾಗ ಕೇರಳ ಹೈಕೋರ್ಟ್ ಆ ಅರ್ಜಿಯನ್ನು ತಿರಸ್ಕರಿಸಿದೆ ಎಂದು ಹೇಳಿದೆ.