ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ: 3 ಎಲ್ಇಟಿ ಉಗ್ರರ ಹತ್ಯೆ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆ ಹಾಗೂ ಭಯೋತ್ಪಾದಕ ನಡುವೆ ನಡೆದ  ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಮಂಗಳವಾರ ಮುಂಜಾನೆ ಎನ್‌ಕೌಂಟರ್ ನಡೆದಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹತ್ಯೆಯಾದವು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸದಸ್ಯರು ಎಂದು ಗುರುತಿಸಿದ್ದಾರೆ.

ಕಾಶ್ಮೀರ ಪ್ರದೇಶದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಮುಂದುವರೆದಿದೆ. ಹತ್ಯೆಗೀಡಾದ ಮೂವರು ಉಗ್ರರ ಪೈಕಿ ಇಬ್ಬರನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಮೂರನೆಯವರ ಗುರುತಿಸುವಿಕೆ ಇನ್ನೂ ನಡೆಯುತ್ತಿದೆ.

ಇಬ್ಬರು ಭಯೋತ್ಪಾದಕರಲ್ಲಿ ಓರ್ವ ಕಾಶ್ಮೀರಿ ಪಂಡಿತ್ ಪುರಾಣ ಕೃಷ್ಣ ಭಟ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಶೋಪಿಯಾನ್ ಜಿಲ್ಲೆಯ ಲತೀಫ್ ಲೋನ್ ಎಂದು ಗುರುತಿಸಲಾಗಿದೆ ಮತ್ತು ಇನ್ನೊಬ್ಬ ಅನಂತನಾಗ್‌ನ ಉಮರ್ ನಜೀರ್, ಟಿಲ್ ಬಹದ್ದೂರ್ ಹತ್ಯೆಯಲ್ಲಿ ಭಾಗಿಯಾಗಿದ್ದವ. ಎಂದು ಕಾಶ್ಮೀರ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕರು ಹೇಳಿದ್ದಾರೆ.

ಭಯೋತ್ಪಾದಕರಿಂದ ಒಂದು ಎಕೆ-47 ರೈಫಲ್ ಮತ್ತು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!