ನಾಗಠಾಣದಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಜೆ.ಪಿ.ನಡ್ಡಾ ಅಧಿಕೃತ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಜಯ ಸಂಕಲ್ಪ ಅಭಿಯಾನಕ್ಕೆ ನಾಗಠಾಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಇದಕ್ಕೂ ಮೊದಲು ಅವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಟ್ಟ ಜೆ.ಪಿ.ನಡ್ಡಾ ಅವರನ್ನು ಮುಖಂಡರು ಸನ್ಮಾನಿಸಿದರು.
ಮನೆಮನೆ ಭೇಟಿ ಮಾಡಿದ ರಾಷ್ಟ್ರೀಯ ಅಧ್ಯಕ್ಷರು ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಇದೇ ಸಮಯದಲ್ಲಿ ಪಕ್ಷದ ಸ್ಟಿಕರ್ ಹಂಚುವ ಅಭಿಯಾನಕ್ಕೂ ಚಾಲನೆ ಕೊಟ್ಟರು.

ಪಕ್ಷದ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಸಚಿವ ಡಾ. ಅಶ್ವತ್ಥನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡುವ ಮೊದಲು ನಡ್ಡಾ ಅವರು ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಪಕ್ಷದ ಮುಖಂಡರು, ಶಾಸಕರು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿದರು. ಸಿಂಧಗಿಗೆ ತೆರಳುವ ಅವರು ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲೂ ಭಾಗವಹಿಸುವರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!