Saturday, January 28, 2023

Latest Posts

ಸಿದ್ದೇಶ್ವರ ಶ್ರೀಗಳಿಗೆ ಪುಷ್ಪನಮನ ಸಲ್ಲಿಸಿದ ಜೆ.ಪಿ. ನಡ್ಡಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಗೌರವಪೂರ್ವಕ ಪುಷ್ಪನಮನ ಸಲ್ಲಿಸಿದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಸಚಿವ ಬೈರತಿ ಬಸವರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಇದ್ದರು.
ಇದಕ್ಕೂ ಮೊದಲು ಅವರು ಹರಿಹರ ಜಿಲ್ಲೆಯ ಶ್ರೀ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕ ಗುರುಪೀಠ, ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠಗಳಲ್ಲಿ ಅವರು ಮಠಾಧೀಶರನ್ನು ಭೇಟಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!