ಜಡ್ಡು-ಸುಂದರ್ ಬೌಲಿಂಗ್ ಮ್ಯಾಜಿಕ್: ನ್ಯೂಜಿಲೆಂಡ್ 235 ರನ್​ಗಳಿಗೆ ಆಲೌಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ ತಂಡ 235 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.

ತಂಡದ ಪರ ಡೇರೆಲ್ ಮಿಚೆಲ್ ಅತ್ಯಧಿಕ 82 ರನ್​ಗಳ ಇನ್ನಿಂಗ್ಸ್ ಆಡಿದರೆ, ವಿಲ್ ಯುಂಗ್ 71 ರನ್​ಗಳ ಕಾಣಿಕೆ ನೀಡಿದರು. ಈ ಇಬ್ಬರನ್ನು ಹೊರತುಪಡಿಸಿ ಮತ್ತ್ಯಾರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.

ಟೀಂ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮಿಂಚಿದ ರವೀಂದ್ರ ಜಡೇಜಾ ಅತ್ಯಧಿಕ 5 ವಿಕೆಟ್ ಉರುಳಿಸಿದರೆ, ಅವರಿಗೆ ಸಾಥ್ ನೀಡಿದ ವಾಷಿಂಗ್ಟನ್ ಸುಂದರ್ 4 ವಿಕೆಟ್ ಪಡೆದರು. ಉಳಿದ 1 ವಿಕೆಟ್ ಆಕಾಶ್ ದೀಪ್ ಪಾಲಾಯಿತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!