ಶತಕ ಸಂಭ್ರಮಿಸಿದ ಜಡೇಜಾ: ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 416!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಎಡ್ಜ್‌ಬಾಸ್ಟನ್‌ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ನಿನ್ನೆ ರಿಷಭ್ ಪಂತ್ ಅಮೋಘ ಬ್ಯಾಟಿಂಗ್ ಮತ್ತು ಇಂದು ಆಲ್ರೌಂಡರ್ ರವೀಂದ್ರ ಜಡೇಜಾ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 416 ರನ್‌ ಬಾರಿಸಿ ಸರ್ವಪತನ ಕಂಡಿದೆ.
ರವೀಂದ್ರ ಜಡೇಜಾ ಟೆಸ್ಟ್‌ ವೃತ್ತಿಜೀವನದ ಮೂರನೇ ಶತಕ ಸಿಡಿಸಿ ಸಂಭ್ರಮಿಸಿದರೇ, ನಾಯಕನಾಗಿ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುತ್ತಿರುವ ಜಸ್ಪ್ರೀತ್ ಬುಮ್ರಾ ಸ್ಪೋಟಕ ಬ್ಯಾಟಿಂಗ್ (31*) ಮೂಲಕ ಟೀಂ ಇಂಡಿಯಾವನ್ನು 400 ರನ್ ಗಡಿ ದಾಟಿಸುವಲ್ಲಿ ಮಹತ್ತರ ವಹಿಸಿದರು.

ಮೊದಲ ದಿನದಾಟದಂತ್ಯದ ವೇಳೆಗೆ 7 ವಿಕೆಟ್‌ ಕಳೆದುಕೊಂಡು 338 ರನ್‌ ಬಾರಿಸಿದ್ದ ಭಾರತ ತಂಡವು, ಎರಡನೇ ದಿನದಾಟವನ್ನು ಉತ್ತಮವಾಗಿಯೇ ಆರಂಭಿಸಿತು. ರವೀಂದ್ರ ಜಡೇಜಾಗೆ ವೇಗಿ ಮೊಹಮ್ಮದ್ ಶಮಿ ಬ್ಯಾಟಿಂಗ್‌ನಲ್ಲಿ ಉತ್ತಮ ಸಾಥ್ ನೀಡಿದರು. ಶಮಿ 16 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಜಡೇಜಾ 194 ಎಸೆತಗಳನ್ನು ಎದುರಿಸಿ 13 ಬೌಂಡರಿ ಸಹಿತ 104 ರನ್ ಬಾರಿಸಿ ಜೇಮ್ಸ್ ಆಂಡರ್‌ಸನ್ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!