ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ, ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ವಿಚಾರವನ್ನು ಜಡೇಜಾ ಪತ್ನಿ ರಿವಾಬ ಜಡೇಜಾ ಖಚಿತಪಡಿಸಿದ್ದಾರೆ.
ಸದ್ಯ ದೇಶಾದ್ಯಂತ ಬಿಜೆಪಿ ಸದಸ್ಯತ್ವ ಆಂದೋಲನ ಭರದಿಂದ ಸಾಗುತ್ತಿದೆ. ಇದೀಗ ರಿವಾಬ ಜಡೇಜಾ, ತಮ್ಮ ಪತಿ ಹಾಗೂ ಕ್ರಿಕೆಟಿಗ ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಪಡೆದಿರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ‘ಎಕ್ಸ್’ ಖಾತೆ ಮೂಲಕ ಹಂಚಿಕೊಂಡಿದ್ದಾರೆ. ರಿವಾಬ ಜಡೇಜಾ ಸದಸ್ಯತ್ವ ಅಭಿಯಾನ ಎನ್ನುವ ಹ್ಯಾಷ್ ಟ್ಯಾಗ್ ಜತೆಗೆ ತಮ್ಮ ಹಾಗೂ ತಮ್ಮ ಪತಿ ಜಡೇಜಾ ಅವರ ಬಿಜೆಪಿ ಸದಸ್ಯತ್ವದ ಕಾರ್ಡ್ ಹಂಚಿಕೊಂಡಿದ್ದಾರೆ.
ರವೀಂದ್ರ ಜಡೇಜಾ ಅವರ ಪತ್ನಿ ಈಗಾಗಲೇ ಬಿಜೆಪಿಯಲ್ಲಿದ್ದು, ಅವರು ಗುಜರಾತ್‌ನ ಜಾಮ್‌ನಗರ ಉತ್ತರ ಕ್ಷೇತ್ರದ ಶಾಸಕರೂ ಆಗಿದ್ದಾರೆ. ಇದೀಗ ಪತಿ ರವೀಂದ್ರ ಜಡೇಜಾ ಬಿಜೆಪಿಯ ಸದಸ್ಯತ್ವ ಸ್ವೀಕರಿಸಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ರಿವಾಬಾ ಜಡೇಜಾ ಈ ಮಾಹಿತಿ ನೀಡಿದ್ದಾರೆ.
https://x.com/Rivaba4BJP/status/1830690095630041175?ref_src=twsrc%5Etfw
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 02ರಂದು ನವದೆಹಲಿಯಲ್ಲಿ ತಮ್ಮ ಸದಸ್ಯತ್ವವನ್ನು ನವೀಕರಿಸಿಕೊಂಡಿದ್ದರು.