spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಟೆಸ್ಟ್​ ರ‍್ಯಾಂಕಿಂಗ್: ಜಡೇಜಾಗೆ ಆಲ್​ರೌಂಡರ್ ನಲ್ಲಿ 2ನೇ ಸ್ಥಾನ, 10ರಲ್ಲಿ ಕೊಹ್ಲಿ, ರೋಹಿತ್​, ರಿಷಭ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಂತಾರಾಷ್ಟ್ರೀಯ ಕ್ರಿಕೆಟ್​ ಸಂಸ್ಥೆ(ಐಸಿಸಿ) ಟೆಸ್ಟ್​ ಶ್ರೇಯಾಂಕ ಪಟ್ಟಿಯಲನ್ನು ಬಿಡುಗಡೆಗೊಳಿಸಿದ್ದು, ರವೀಂದ್ರ ಜಡೇಜಾ ಆಲ್​ರೌಂಡರ್​ ಶ್ರೇಯಾಂಕದಲ್ಲಿ ಇಂಗ್ಲೆಂಡ್​ನ ಬೆನ್​ ಸ್ಟೋಕ್ಸ್​ರನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ.
ಬುಧವಾರ ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಬೌಲಿಂಗ್ ಶ್ರೇಯಾಂಕದಲ್ಲಿ ರವಿ ಚಂದ್ರನ್ ಅಶ್ವಿನ್​ 2ನೇ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರೆ, ಬ್ಯಾಟ್ಸ್​ಮನ್​ಗಳ ಪೈಕಿ ರೋಹಿತ್​, ವಿರಾಟ್​ ಕೊಹ್ಲಿ ಮತ್ತು ರಿಷಭ್ ಪಂತ್ ಅಗ್ರ 10ರಲ್ಲಿ ಕಾಣಿಸಿಕೊಂಡಿದ್ದಾರೆ.
ನ್ಯೂಜಿಲ್ಯಾಂಡ್ ಮತ್ತು ಇಂಗ್ಲೆಂಡ್​ ಸರಣಿಯ ಮೊದಲ ಪಂದ್ಯದ ಬಳಿಕ ಐಸಿಸಿ ನೂತನ ರ‍್ಯಾಂಕಿಂಗ್ ಬಿಡುಗಡೆ ಮಾಡಿದೆ. ಇದರಲ್ಲಿ ಜಡೇಜಾ 386 ಅಂಕ ಪಡೆದು 2ನೇ ಸ್ಥಾನದಲ್ಲಿದ್ದರೆ, ಹೋಲ್ಡರ್​ ಅವರಿಗಿಂತ 37 ಅಂಕ ಹೆಚ್ಚಿಗೆ ಪಡೆದು ಅಗ್ರಸ್ಥಾನ ಪಡೆದಿದ್ದಾರೆ. ನ್ಯೂಜಿಲ್ಯಾಂಡ್​ ವಿರುದ್ಧದ ಸರಣಿಯಲ್ಲಿ ತಂಡದಿಂದ ಹೊರಗಿರುವ ಬೆನ್​ ಸ್ಟೋಕ್ಸ್​ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಭಾರತದ ಆರ್. ಅಶ್ವಿನ್ 4ನೇ ಸ್ಥಾನದಲ್ಲಿದ್ದಾರೆ.
ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್​ಮನ್ ರೋಹಿತ್ ಶರ್ಮಾ ನ್ಯೂಜಿಲೆಂಡ್ ತಂಡದ ಹೆನ್ರಿ ನಿಕೊಲ್ಸ್​ರನ್ನು ಹಿಂದಿಕ್ಕಿ 7ನೇ ಸ್ಥಾನಕ್ಕೇರಿದರೆ, ರಿಷಭ್ ಪಂತ್ 6ನೇ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್​ ಮತ್ತು ಲಾಬುಶೇನ್ ಅಗ್ರ 3ರಲ್ಲಿದ್ದಾರೆ.
ಇಂಗ್ಲೆಂಡ್ ವಿರುದ್ಧ 5 ವಿಕೆಟ್ ಪಡೆದಿದ್ದ ಕಿವೀಸ್​ ಅನುಭವಿ ಬೌಲರ್​ ಟಿಮ್​ ಸೌಥಿ ಬೌಲಿಂಗ್ ಶ್ರೇಯಾಂಕದಲ್ಲಿ 3 ಸ್ಥಾನ ಮೇಲೇರಿ ಟಾಪ್ 3ಕ್ಕೆ ಬಡ್ತಿ ಪಡೆದರೆ, ಕೇವಲ ಒಂದು ವಿಕೆಟ್ ಪಡೆದಿದ್ದ ನೀಲ್ ವ್ಯಾಗ್ನರ್​ 2 ಸ್ಥಾನ ಕುಸಿದು 5ಕ್ಕೆ ಇಳಿದಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್​ ಮತ್ತು ಭಾರತದ ರವಿಚಂದ್ರನ್ ಅಶ್ವಿನ್ ಅಗ್ರ 2ರಲ್ಲಿ ಮುಂದುವರಿದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss