ಗುಜರಾತ್ ಚುನಾವಣಾ ಅಂಗಳದಲ್ಲಿ ಜಡೇಜಾ ಪತ್ನಿ?: ಕೌಟುಂಬಿಕ ರಾಜಕೀಯ ಕದನಕ್ಕೆ ಸಾಕ್ಷಿಯಾಗುತ್ತಾ ಈ ಕ್ಷೇತ್ರ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್ ವಿಧಾನಸಭಾ ಚುನಾವಣೆಗೆ ಎಲ್ಲ ರಾಜಕೀಯ ಪಕ್ಷಗಳು ಸಕಲ ಸಿದ್ಧತೆ ನಡೆಸುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತೆ ಅದಿಕಾರಕ್ಕೇರಲು ಭರ್ಜರಿ ತಯಾರಿ ನಡೆಸಿವೆ. ಇದರ ಮಧ್ಯೆ ಜಾಮ್‌ನಗರ ಉತ್ತರ ವಿಧಾನಸಭಾ ಕ್ಷೇತ್ರ ಕೌಟುಂಬಿಕ ರಾಜಕೀಯ ಕದನಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ.

ಹೌದು, ಟೀಮ್ ಇಂಡಿಯಾ ಆಟಗಾರ ರವೀಂದ್ರ ಜಡೇಜಾ ಪತ್ನಿ ಈ ಚುನಾವಣೆಯಲ್ಲಿ ಕಣಕ್ಕೆ ಇಳಿಯುವ ಸಾಧ್ಯತೆ ಇದ್ದರೆ, ಕಾಂಗ್ರೆಸ್‌ನಿಂದ ಜಡೇಜಾರ ಸೋದರಿ ನೈನಾ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ.

ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಖ್ಯಾತ ಉದ್ಯಮಿಯೊಬ್ಬರ ಪುತ್ರಿಯಾಗಿದ್ದು, 2019ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಅಲ್ಲದೆ ಸ್ಥಳೀಯ ನಾಯಕಿಯಾಗಿಯೂ ಅವರು ಗುರುತಿಸಿಕೊಂಡಿದ್ದು, ಹೀಗಾಗಿ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಜಾಮ್ ನಗರ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತೊಂದೆಡೆ ಜಡೇಜಾ ಸೋದರಿ ನೈನಾ ಜಾಮ್‌ನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷೆ. ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಅವರಿಗೂ ಟಿಕೆಟ್‌ ಸಿಗುವ ಸಾಧ್ಯತೆ ದಟ್ಟವಾಗಿದೆ.
ಹೀಗಾಗಿ ಕೌಟುಂಬಿಕ ರಾಜಕೀಯ ಕದನಕ್ಕೆ ಜಾಮ್ ನಗರ ಸಾಕ್ಷಿಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!