ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಸಂದರ್ಭ ಆಯೋಜಿಸಲಾಗಿರುವ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಎಲ್ಲಾ ಶಾಖೆಯ ಪೂಜ್ಯ ಸ್ವಾಮೀಜಿಗಳವರು, ಬೃಹತ್ ಕೈಗಾರಿಕಾ ಮತ್ತು ಉಕ್ಕು ಸಚಿವ ಶ್ರೀ ಎಚ್ ಡಿ ಕುಮಾರಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಶಾಸಕ ಡಾ.ಸಿ.ಎನ್. ಅಶ್ವಥ್ ನಾರಾಯಣ, ಮಾಜಿ ಸಚಿವ, ಶಾಸಕ ಪುಟ್ಟರಾಜು ಸಿ.ಎಸ್, ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಹೆಚ್. ಆರ್ ರಂಗನಾಥ್, ಕರ್ನಾಟಕ ಜನಪದ ಪರಿಷತ್ ಅಧ್ಯಕ್ಷ ಹಿ.ಚಿ. ಬೋರಲಿಗಯ್ಯ, ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕಲಾವಿದರು, ಶ್ರೀ ಮಠದ ಸದ್ಭಕ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ‘ಚುಂಚಶ್ರೀ ಪ್ರಶಸ್ತಿ ಪ್ರದಾನ’ ವನ್ನು ಸಾಹಿತ್ಯ ಹಾಗೂ ಜಾನಪದ ಕ್ಷೇತ್ರದಲ್ಲಿ ಡಾ. ರಾಮೇಗೌಡ, ಸಮಾಜ ಸೇವೆಗೆ ಶ್ರೀ ಹಿರಯಣ್ಣ ಹೆಗಡೆ, ಶೈಕ್ಷಣಿಕ ಕ್ಷೇತ್ರಕ್ಕೆ ಪ್ರೊ. ಬಸವೇಗೌಡ, ಜಾನಪದ ಕ್ಷೇತ್ರದ ಮಲ್ಲವ್ವ ಬಸಪ್ಪ ಮೇಗೇರಿ ಅವರಿಗೆ ಪೂಜ್ಯ ಮಹಾಸ್ವಾಮೀಜಿ ಗೌರವಿಸಿ ಆಶೀರ್ವದಿಸಿದರು.