ಇನ್ನು ಮುಂದೆ ಪ್ರತಿ ವರ್ಷ ಮಾ. 16 ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರಕಾರ ಕೈಗೊಂಡಿದೆ.

ಈ ಸಂಬಂಧ ಇಂದು ಸರಕಾರಿ ಆದೇಶ ಹೊರಡಿಸಲಾಗಿದೆ.

ಜಗದ್ಗುರು ಶ್ರೀರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ. ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ಸಾರಿದವರು ಜಗದ್ಗುರು ರೇಣುಕಾಚಾರ್ಯರು. ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರಕಾರ ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾ. 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!