ರಂಭಾಪುರಿ ಜಗದ್ಗುರುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಒತ್ತಾಯಿಸಿ ಬೇಡ ಜಂಗಮರು ಫ್ರೀಡಂ ಪಾರ್ಕ್ ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದ ನಡುವೆ ಸಮುದಾಯದ ಪ್ರಮುಖ ಶ್ರೀಗಳಾದ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದು, ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ನಗರದ ಜೆ.ಪಿ.ನಗರದ ಶ್ರೀ ಸೋಮೇಶ್ವರ ಸಭಾಭವನದಲ್ಲಿ ವಾಸ್ತವ್ಯ ಹೂಡಿರುವ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶ್ರೀಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಭೇಟಿ ಮಾಡಿ, ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು. ಬಳಿಕ ಕೆಲಕಾಲ ಮಾತುಕತೆ ನಡೆಸಿದರು.ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿ ಜಂಗಮರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಅದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ, ರಂಭಾಪುರಿ ಪೀಠದ ಜಗದ್ಗುರುಗಳ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!