ಆಂಧ್ರದಲ್ಲಿ ಇಂದು 13 ಹೊಸ ಜಿಲ್ಲೆಗಳು ಅಸ್ತಿತ್ವಕ್ಕೆ; ಒಟ್ಟು ಜಿಲ್ಲೆಗಳ ಸಂಖ್ಯೆ 26ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಆಂಧ್ರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ 13 ಜಿಲ್ಲೆಗಳಲ್ಲಿ 26 ಜಿಲ್ಲೆಗಳನ್ನು ರಚಿಸಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಎಲ್ಲಾ ಹೊಸ ಜಿಲ್ಲೆಗಳು ಇಂದಿನಿಂದ (ಸೋಮವಾರ)ದಿಂದ ಅಸ್ತಿತ್ವಕ್ಕೆ ಬರಲಿವೆ ಎಂದು ಸರ್ಕಾರದ ಗೆಜೆಟ್ ಪ್ರಕಟಣೆ ತಿಳಿಸಿದೆ.
2019 ರ ವಿಧಾನಸಭಾ ಚುನಾವಣೆಯ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಸ್ತುತ ಆಂಧ್ರ ಮುಖ್ಯಮಂತ್ರಿಯಾಗಿರುವ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು, ತಮ್ಮ ಪಕ್ಷವು ರಾಜದಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಲೋಕಸಭಾ ಕ್ಷೇತ್ರವನ್ನು ಜಿಲ್ಲೆಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಪ್ರತ್ಯೇಕ ಜಿಲ್ಲೆಗಳನ್ನು ಅಸ್ತಿತ್ವಕ್ಕೆ ತರುವ ಕುರಿತಾಗಿ ಸರ್ಕಾರವು ಕಳೆದ ಜನವರಿಯಲ್ಲಿಯೇ ಕರಡು ಅಧಿಸೂಚನೆಯನ್ನು ಹೊರಡಿಸಿ ಸಲಹೆಗಳು ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು.
ರಾಜ್ಯವು 25 ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಪೂರ್ವ ಗೋದಾವರಿ ಮತ್ತು ವಿಶಾಖಪಟ್ಟಣಂನಲ್ಲಿನ ಬುಡಕಟ್ಟು ಪ್ರದೇಶಗಳನ್ನು ಒಗ್ಗೂಡಿಸಿ ೨೬ ನೇ ಜಿಲ್ಲೆಯನ್ನಾಗಿ ರಚಿಸಲಾಯಿತು.
ಅಧಿಸೂಚನೆ ಪ್ರಕಟವಾದ ವೈಎಸ್ಆರ್ ಕಾಂಗ್ರೆಸ್ ಸರ್ಕಾರವು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ನೂತನ ಜಿಲ್ಲೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!