ಪೊಲೀಸರ ಮೇಲೆ ಹಲ್ಲೆ ನಡೆಸಿದ ಜಗನ್ ಸಹೋದರಿ ಶರ್ಮಿಳಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವೈಎಸ್‍ಆರ್ ತೆಲಂಗಾಣ ಪಕ್ಷದ (YSR Telangana Party) ನಾಯಕಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ (Jagan Mohan Reddy) ಸಹೋದರಿ ವೈ.ಎಸ್ ಶರ್ಮಿಳಾ (Y.S Sharmila) ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ತೆಲಂಗಾಣ ಸರ್ಕಾರ ನಡೆಸುವ ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಎಸ್‌ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿ ಅಲ್ಲಿಗೆ ತೆರಳಿದ್ದಾರೆ. ಆದರೆ ಈ ವೇಳೆ ಅವರನ್ನು ಪೊಲೀಸರು ತಡೆದಿದ್ದು, ಮಾತಿನ ಚಕಮಕಿ ನಡೆದಿದೆ.

ಪೊಲೀಸರು ಶರ್ಮಿಳಾ ಅವರ ಕಾರನ್ನು ತಡೆಡಿದ್ದು,ಬಳಿಕ ವಿಶೇಷ ತನಿಖಾ ಸಂಸ್ಥೆ ಕಚೇರಿ ಮುಂದೆ ಬಂದು ಧರಣಿ ಕುಳಿತಿದ್ದಾರೆ. ನಂತರ ಆಕೆಯನ್ನು ಮಹಿಳಾ ಪೊಲೀಸ್ ಸಿಬ್ಬಂದಿ ಅಲ್ಲಿಂದ ಏಳಲು ಹೇಳಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಪುರುಷ ಪೊಲೀಸ್ ಅಧಿಕಾರಿಯ ಕೆನ್ನೆಗೆ ಶರ್ಮಿಳಾ ಹೊಡೆದಿದ್ದಾರೆ. ಈ ವೇಳೆ ಮಹಿಳಾ ಪೊಲೀಸರು ಮ್ಯಾಡಮ್ ಮ್ಯಾಡಮ್ ಎಂದು ಕರೆದರು ಕೇಳದ ಶರ್ಮಿಳಾ ಪೊಲೀಸ್ ಅಧಿಕಾರಿ ಮೇಲೆ ಕೈ ಮಾಡಿದ್ದಾರೆ. ಅಲ್ಲದೇ ಮಹಿಳಾ ಸಿಬ್ಬಂದಿ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!