ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಜಗದೀಪ್ ಧನಕರ್ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನಾಂಕವಾಗಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!