ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಖರ್ ರಾಜೀನಾಮೆ: ಪ್ರಧಾನಿ ಮೋದಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಖರ್ ಈಗಾಗಲೇ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇದೀಗ ಪ್ರಧಾನಿ ನರೇಂದ್ರ ಮೋದಿ ಜಗದೀಪ್ ಧನ್ಖರ್​ ಕುರಿತು ಪೋಸ್ಟ್​ ಮಾಡಿದ್ದಾರೆ. ಉತ್ತಮ ಆರೋಗ್ಯ ಅವರದ್ದಾಗಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್​​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ತಮ್ಮ ಟ್ವೀಟ್‌ನಲ್ಲಿ, ‘ಶ್ರೀ ಜಗದೀಪ್ ಧನಕರ್‌ರವರು ಭಾರತದ ಉಪರಾಷ್ಟ್ರಪತಿಯಾಗಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ,’ ಎಂದು ಬರೆದಿದ್ದಾರೆ.

74 ವರ್ಷದ ಜಗದೀಪ್ ಧನ್ಖರ್‌ ಅವರು 2022ರ ಆಗಸ್ಟ್‌ನಿಂದ ಭಾರತದ 14ನೇ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಜುಲೈ 21, 2025ರಂದು, ಸಂಸತ್‌ನ ಮಾನ್ಸೂನ್ ಅಧಿವೇಶನದ ಮೊದಲ ದಿನವೇ ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದರು.

ಆದ್ರೆ ಧನ್ಖರ್ ಅವರ ಹಠಾತ್ ರಾಜೀನಾಮೆ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿವೆ. ಧನ್ಖರ್ ಅವರ ಆರೋಗ್ಯ ಸಂಪೂರ್ಣವಾಗಿ ಚೆನ್ನಾಗಿದೆ ಎಂದು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಹೇಳಿವೆ. ಅವರು ಕೆಲವು ಒತ್ತಡದಲ್ಲಿ ರಾಜೀನಾಮೆ ನೀಡಿರುವ ಸಾಧ್ಯತೆಯಿದೆ ಎಂದು ಹೇಳುತ್ತಿದೆ.

ಜಗದೀಪ್ ದನ್ಖರ್ ರಾಜೀನಾಮೆ ಬಳಿಕ ಉಪ ರಾಷ್ಟ್ರಪತಿ ಹುದ್ದೆಯನ್ನು ತುಂಬಲು ಚುನಾವಣಾ ಪ್ರಕ್ರಿಯೆಯನ್ನು ಮತ್ತೆ ಪೂರ್ಣಗೊಳಿಸಬೇಕಾಗುತ್ತದೆ. ಅದರ ನಂತರ ದೇಶವು ಹೊಸ ಉಪರಾಷ್ಟ್ರಪತಿಯನ್ನು ಪಡೆಯುತ್ತದೆ. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರು ಮಾತ್ರ ಮತದಾನದ ಹಕ್ಕು ಹೊಂದಿರುತ್ತಾರೆ ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಿಗೂ ಈ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!