Friday, October 7, 2022

Latest Posts

ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್‌ ಧನಕರ್‌ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದೇಶದ ಹದಿನಾಲ್ಕನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು 11.45ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಮತ್ತು ಗೌಪ್ಯತಾ ವಚನ ಬೋಧಿಸಿದರು.
ಆಗಸ್ಟ್‌ 6 ರಂದು ನಡೆದಿದ್ದ ಚುನಾವಣೆಯಲ್ಲಿ ಎನ್‌ಡಿಎ ಧನಕರ್‌ ಅವರು ದೇಶದ ಉಪರಾಷ್ಟ್ರಪತಿಯಾಗಿ ಚುನಾಯಿತರಾಗಿದ್ದರು. ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್‌ ಆಳ್ವಾ ವಿರುದ್ಧ ಶೇ.74.36ರಷ್ಟು ಮತಗಳನ್ನು ಪಡೆದು ವಿಜೇತರಾಗಿ ಹೊರಹೊಮ್ಮಿದರು. ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ಜಗದೀಪ್‌ ಧನಕರ್‌, ದೆಹಲಿಯ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ನಮನ ಸಲ್ಲಿಸಿದರು.

ರಾಜಸ್ಥಾನದ ಜುಂಜುನು ಜಿಲ್ಲೆಯ ಹಳ್ಳಿಯೊಂದರಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಜಗದೀಪ್ ಧನಕರ್, ರಾಜಸ್ಥಾನ ವಿಶ್ವವಿದ್ಯಾನಿಲಯದಿಂದ LLB ಅಧ್ಯಯನ ಮಾಡಿದ್ದಾರೆ. ಮತ್ತು ಹಲವಾರು ವರ್ಷಗಳ ಕಾಲ ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ.
1989 ರಲ್ಲಿ, ಜುಂಜುನು ಲೋಕಸಭೆ ಚುನಾವಣೆಯಲ್ಲಿ ಜನತಾದಳ ಪಕ್ಷದಿಂದ ಸಂಸದರಾಗಿ ಗೆದ್ದರು. ನಂತರ 1990 ರಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದರು. 1993 ರಲ್ಲಿ ಅವರು ಅಜ್ಮೀರ್ ಜಿಲ್ಲೆಯ ಕಿಶನ್ಗಢ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಜುಲೈ 17, 2019-2022 ರಿಂದ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಬಳಿಕ 2008ರಲ್ಲಿ ಬಿಜೆಪಿ ಸೇರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!