ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಜಗದೀಶ್ ಶೆಟ್ಟರ್ ಒಪ್ಪಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಪರ್ಧಿಸುವುದು ಖಚಿತವಾಗಿದೆ. ಧಾರವಾಡ ಅಥವಾ ಹಾವೇರಿ ಕ್ಷೇತ್ರಗಳತ್ತ ಒಲವು ತೋರಿದ್ದ ಶೆಟ್ಟರ್ ಎರಡೂ ಕ್ಷೇತ್ರಗಳಿಂದ ಟಿಕೆಟ್ ಕಳೆದುಕೊಂಡಿದ್ದು, ಈಗ ಉಳಿದಿರುವ ಬೆಳಗಾವಿಯನ್ನೇ ಆಯ್ಕೆ ಮಾಡಿಕೊಳ್ಳಬೇಕಿದೆ.

ಬುಧವಾರ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ನಂತರ ಅಸಮಾಧಾನಗೊಂಡಿದ್ದ ಶೆಟ್ಟರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಮೂಲಕ ಸಂಪರ್ಕಿಸಿದ್ದು, ಶೆಟ್ಟರ್ ಅವರನ್ನು ಸಮಾಧಾನ ಪಡಿಸಿದ್ದಾರೆ.

ಬೆಂಗಳೂರಿಗೆ ಭೇಟಿ ನೀಡಿರುವ ಜಗದೀಶ್ ಶೆಟ್ಟರ್ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಹಲವು ಹಿರಿಯ ನಾಯಕರ ಜೊತೆ ಚರ್ಚೆ ನಡೆಸಿದರು. ಬೆಂಗಳೂರಿಗೆ ಆಗಮಿಸುವ ಮುನ್ನ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಪಕ್ಷದ ಮುಖಂಡರು, ಶಾಸಕರು ಹಾಗೂ ಮಾಜಿ ಶಾಸಕರೊಂದಿಗೆ ಖುದ್ದು ಮಾತುಕತೆ ನಡೆಸಿದರು. ಎಲ್ಲರೂ ಶೆಟ್ಟರ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!