ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರಲ್ಲಿ ನಕಲಿ ರಾಜೀನಾಮೆ ಪತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.
ಹೈಕಮಾಂಡ್ ನಿರ್ಧಾರದಿಂದ ಮನಸ್ಸಿಗೆ ಬಹಳ ನೋವಾಗಿದ್ದು ಪಕ್ಷದಲ್ಲಿ ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.
ಇದೀಗ ಕುರಿತು ಹುಬ್ಬಳ್ಳಿಯಲ್ಲಿ ಸ್ವತಃ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. ‘ನಾನು ಬಿಜೆಪಿಗೆ ರಾಜೀನಾಮೆ ಕೊಟ್ಟಿಲ್ಲ. ನನಗೆ ಈಗಲೂ ಟಿಕೆಟ್ ಸಿಗುವ ಭರವಸೆ ಇದೆ. ವರಿಷ್ಠರ ಜೊತೆ ನಾನು ಮಾತುಕತೆ ನಡೆಸಿದ್ದೇನೆ. ಆದರೆ, ಚುನಾವಣೆಗೆ ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಾನು ರಾಜೀನಾಮೆ ಪತ್ರ ಬರೆದಲ್ಲಿ ಅದು ಇಂಗ್ಲೀಷ್‌ನಲ್ಲಿ ಇರುತ್ತದೆ. ಕನ್ನಡದಲ್ಲಿ ಜೆಪಿ ನಡ್ಡಾಗೆ ಪತ್ರ ಬರೆಯಲು ಸಾಧ್ಯವೇ? ಅದು ನಾನು ಬರೆದ ಪತ್ರವಲ್ಲ ಎಂದು ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.