ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಂತರ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿರುವುದು ತಿಳಿದು ಬಂದಿದೆ.
ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಗೆ ವಿದಾಯ ಹೇಳಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ಇದಾದ ನಂತರ ಲಕ್ಷ್ಮಣ ಸವದಿಗೆ ಬಿಜೆಪಿ ಗಾಳ ಹಾಕಿದ್ದು, ಬಿಜೆಪಿ ಮುಖಂಡರು ಲಕ್ಷ್ಮಣ ಸವದಿ ಅವರನ್ನು ಸಂಪರ್ಕಿಸಿ ಪಕ್ಷಕ್ಕೆ ಸೇರುವಂತೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಟ್ಟಿನಲ್ಲಿ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದ್ದು, ಜಗದೀಶ್ ಶೆಟ್ಟರ್ ಬೆನ್ನಲ್ಲೇ ಮತ್ತೊಂದು ವಿಕೆಟ್ ಪತನವಾಗುವ ಸಾಧ್ಯತೆಯಿದೆ.