ಜಗದೀಶ್ ಶೆಟ್ಟರ್ ಬಿಜೆಪಿ ಬಿಡೋ ಮಾತೇ ಇಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಮಾಜಿ ಸಿಎಂ ಜಗದೀಶ ಶೆಟ್ಟರ ಅವರಿಗೆ ಟಿಕೆಟ್ ನೀಡುವ ವಿಚಾರ ಕೇಂದ್ರದ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದಾರೆ. ಅವರ ಬಗ್ಗೆ ಸೂಕ್ತವಾದ ನಿರ್ಧಾರ ಹೈಕಮಾಂಡ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಇಲ್ಲಿಯ ಬಾದಾಮಿ ನಗರದ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಜಗದೀಶ ಶೆಟ್ಟರ ಜೊತೆ ಟಿಕೆಟ್ ವಿಚಾರವಾಗಿ ಸುದೀರ್ಘವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದ ವರಿಷ್ಠರು ಸಹ ಚರ್ಚೆ ಮಾಡುತ್ತಿದ್ದಾರೆ ಎಂದರು.

ಅವರು ಪಕ್ಷಕ್ಕಾಗಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಆ ಸೇವೆ ಇನ್ನೂ ಮುಂದುವರಿಯಲಿದೆ. ಅವರು ಪಕ್ಷದಲ್ಲಿ ಇರಲಿದ್ದಾರೆ. ಪಕ್ಷ ಬಿಡುವ ವಿಚಾರ ಗೊತ್ತಿಲ್ಲ. ಬೀಡುವ ಮಾತೇ ಇಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!