ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಜೋರಾದ ಬೆನ್ನಲ್ಲೆ ಡಿಕೆ ಶಿವಕುಮಾರ್ ಅಭಿಮಾನಿಗಳು ಆಗಾಗ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂಬ ಘೋಷಣೆ ಕೂಗುವುದು ಕೂಡ ಸಾಮಾನ್ಯ ಸಂಗತಿಯಾಗಿದೆ. ಅದರಂತೆ ಇಂದು (ಫೆಬ್ರವರಿ 16) ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ವಿವಿಧ ವಾರ್ಡ್‌ಗಳಲ್ಲಿ ಸಿಟಿ ರೌಂಡ್ಸ್ ಹಾಕಿದ್ದಾರೆ. ಈ ವೇಳೆ ಮುಂದಿನ ಸಿಎಂ ಡಿಕೆಶಿ ಎಂಬ ಘೋಷಣೆ ಮೊಳಗಿದೆ.
ಬೆಂಗಳೂರು ಸಿಟಿ ರೌಂಡ್ಸ್ ಆರಂಭಿಸಿದ ಡಿಕೆ ಶಿವಕುಮಾರ್ ಅವರು, ಮಹಾಲಕ್ಷ್ಮಿ ಲೇಔಟ್ ಬಳಿ ಕಾಮಗಾರಿ ಪರಿಶೀಲಿಸಿದ್ದಾರೆ. ಇದೇ ಸಂದರ್ಭದಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೂಡ ಅವರು ವೀಕ್ಷಣೆ ಮಾಡಿದ್ದಾರೆ.
ಈ ವೇಳೆ ಅಭಿಮಾನಿಗಳು “ಮುಂದಿನ ಸಿಎಂ ಡಿಕೆ ಶಿವಕುಮಾರ್‌ಗೆ ಜೈ” ಎನ್ನುವ ಮೂಲಕ ಅಭಿಮಾನ ಮೆರೆದಿದ್ದಾರೆ. ಬೆಂಗಳೂರು ರೌಂಡ್ಸ್‌ನ ಬಹುತೇಕ ಕಡಗಳಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಡಿಕೆ ಮುಂದಿನ ಸಿಎಂ ಎಂಬ ಜಯಘೋಷ ಮೊಳಗಿಸಿದರು.