ಜೈ ಹಿಂದ್‌.. ಜೈ ಭಾರತ್ ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮೆಸೇಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಮ್ -4 ಮಿಷನ್‌ಗಾಗಿ ಐತಿಹಾಸಿಕ ಬಾಹ್ಯಾಕಾಶ ಯಾತ್ರೆ ಕೈಗೊಂಡ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ಭಾರತದ ಜನತೆ ಜೊತೆ ತಮ್ಮ ಮೊದಲ ಸಂದೇಶ ಹಂಚಿಕೊಂಡಿದ್ದಾರೆ.

ಸ್ಪೇಸ್‌ಎಕ್ಸ್‌ನ ‘ಫಾಲ್ಕನ್‌-9’ ರಾಕೆಟ್‌ ಬಾಹ್ಯಾಕಾಶಕ್ಕೆ ಹಾರುತ್ತಿದ್ದಂತೆ, ಮಿಷನ್‌ನ ಪೈಲಟ್ ಆಗಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತವನ್ನುದ್ದೇಶಿಸಿ ‘ನಮಸ್ಕಾರ’ ಎಂಬ ಪದದೊಂದಿಗೆ ಮಾತು ಆರಂಭಿಸಿದರು.

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ.. 41 ವರ್ಷಗಳ ನಂತರ ನಾವು ಬಾಹ್ಯಾಕಾಶವನ್ನು ತಲುಪಿದ್ದೇವೆ. ಇದು ಒಂದು ಉತ್ತಮ ಸವಾರಿಯಾಗಿತ್ತು. ಎಂದು ಶುಭಾಂಶು ಶುಕ್ಲಾ ಭಾರತಕ್ಕಾಗಿ ತಮ್ಮ ಆರಂಭಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಕೆಟ್‌ ಸೆಕೆಂಡಿಗೆ 4.5 ಕಿ.ಮೀ ವೇಗದಲ್ಲಿ ಭೂಮಿಯ ಸುತ್ತಲೂ ಹಾರುತ್ತಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಭುಜದಲ್ಲಿ ಭಾರತೀಯ ತ್ರಿವರ್ಣ ಧ್ವಜವಿದೆ. ಧ್ವಜವು ಬಾಹ್ಯಾಕಾಶ ಹಾರಾಟದಲ್ಲಿ ಭಾರತವೇ ನನ್ನ ಜೊತೆಗಿದೆ ಎಂಬುದನ್ನು ನೆನಪಿಸುತ್ತದೆ. ಇದು ಐಎಸ್‌ಎಸ್‌ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಆರಂಭವೂ ಆಗಿದೆ. ನೀವು ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ. ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ ಎಂದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!