ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಮಾಡಿದ್ದಾರೆ.
“ನಮ್ಮ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಆಧರಿಸಿದ ನಮ್ಮ ಸಂವಿಧಾನವು ಭಾರತೀಯ ಗಣರಾಜ್ಯದ ಹೆಮ್ಮೆಯಾಗಿದೆ, ಇದು ಧರ್ಮ, ಜಾತಿ, ಪ್ರದೇಶ, ಭಾಷೆಯ ಭೇದವಿಲ್ಲದೆ ಪ್ರತಿಯೊಬ್ಬ ಭಾರತೀಯನ ರಕ್ಷಣಾತ್ಮಕ ಗುರಾಣಿಯಾಗಿದೆ ಅದನ್ನು ಗೌರವಿಸುವುದು ಮತ್ತು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಜೈ ಹಿಂದ್, ಜೈ ಇಂಡಿಯಾ, ಜೈ ಸಂವಿಧಾನ” ಎಂದು ತಿಳಿಸಿದ್ದಾರೆ.