ಬೀದರ್‌ನಲ್ಲಿ ನಾಟಕದ ಪ್ರಾಕ್ಟೀಸ್‌ ವೇಳೆ ಕಾಲೇಜಿನಲ್ಲಿ ಜೈ ಶ್ರೀರಾಮ್‌ ಘೋಷಣೆ, ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೀದರ್ ನಗರದ ಹೊರವಲಯದಲ್ಲಿರುವ ಮೈಲೂರಿನಲ್ಲಿರುವ ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಬುಧವಾರ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಮೇ 31 ರಂದು ಯುವಜನೋತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ವಿದ್ಯಾರ್ಥಿಗಳು ಬುಧವಾರ ಅಭ್ಯಾಸ ನಡೆಸುತ್ತಿದ್ದರು, ಇದರಲ್ಲಿ ಜೈ ಶ್ರೀರಾಮ್‌ ಹಾಡು ಹಾಗೂ ಘೋಷಣೆಗಳನ್ನು ಕೂಗಲಾಗಿದೆ.

ನಾಟಕ ಅಭ್ಯಾಸ ಮಾಡುತ್ತಿದ್ದಾಗ ನಾಟಕದ ಭಾಗವಾಗಿದ್ದ ಇಬ್ಬರು ಜೈ ಶ್ರೀ ರಾಮ್ ಘೋಷಣೆ ಕೂಗಿದರು. ಇದಕ್ಕೆ ಇನ್ನೊಂದು ಸಮುದಾಯದ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಕ್ಯಾಂಪಸ್‌ನಲ್ಲಿ ಎರಡೂ ಸಮುದಾಯಗಳ ವಿದ್ಯಾರ್ಥಿಗಳು ಜಗಳ ಆರಂಭಿಸಿದ್ದು ನೂಕುನುಗ್ಗಲು ಉಂಟಾಗಿ ಮಾರಾಮಾರಿ ನಡೆದಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡು ಗುಂಪುಗಳನ್ನು ಪ್ರತ್ಯೇಕಿಸಿ ಪರಿಸ್ಥಿತಿ ಸುದಾರಿಸಿದರು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!