ಹೊಸ ದಿಗಂತ ವರದಿ, ಶಿವಮೊಗ್ಗ:
ಕಾಂಗ್ರೆಸ್ ನಾಯಕರು ಶಿವಮೊಗ್ಗಕ್ಕೆ ಪ್ರತಿಭಟನೆಗೆ ಬಂದಾಗ ಜೈಶ್ರೀರಾಮ್ ಮತ್ತು ಭಾರತ್ ಮಾತಾ ಕೀ ಜೈ ಘೋಷಣೆ ಕೂಗುವುದು ತಪ್ಪು ಎಂದು ಬಹಿರಂಗವಾಗಿ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿ ಘಟನೆಯನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಕ್ರೀಡೆ ಅಥವಾ ಚುನಾವಣೆ ಗೆಲುವಿನ ಸಂದರ್ಭದಲ್ಲಿ ಸಂಭ್ರಮಾಚರಣೆ, ವಿಜಯೋತ್ಸವ ಮಾಡುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಜೈ ಶ್ರೀರಾಮ್, ಭಾರತ್ ಮಾತಾಕೀ ಜೈ ಎಂದು ಕೂಗುವುದು ತಪ್ಪೇ ಎಂದು ಪ್ರಶ್ನಿಸಿದರು.