ಜೈಲು ಬಿಡೋ ಟೈಮ್‌ ಇನ್ನೂ ಬಂದಿಲ್ಲ, ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ದರ್ಶನ್​ಗೆ ಇಂದುಬೇಲ್​ ಸಿಗಬಹುದು ಎಂದು ಆಪ್ತರು ನಿರೀಕ್ಷಿಸಿದ್ದರು. ಆದರೆ ಅವರ ಜಾಮೀನು ಅರ್ಜಿ ವಿಚಾರಣೆ ದಿನಾಂಕವನ್ನು ಮುಂದೂಡಲಾಗಿದೆ.

ಅಕ್ಟೋಬರ್​ 4ರಂದು ಬೇಲ್​ ಅರ್ಜಿ ವಿಚಾರಣೆ ನಡೆಯಲಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!