ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ಮುರುಘಾ ಶ್ರೀ ಮತ್ತೆ ಜೈಲುಪಾಲಾಗಿದ್ದಾರೆ. ನಾಲ್ಕು ತಿಂಗಳ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಪ್ರಕಟಿಸಿದೆ.
ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಪುನಃ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ.