August 31, 2026
Monday, August 31, 2026
spot_img

ಪರೀಕ್ಷಾ ಅಕ್ರಮ ಎಸಗಿದರೆ ಜೈಲು ಗ್ಯಾರಂಟಿ: 70,000 ಹುದ್ದೆಗಳ ಭರ್ತಿಗೆ ಗೃಹ ಇಲಾಖೆ ಹೈ-ಲೆವೆಲ್ ಮೀಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 70,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ರಣತಂತ್ರ

ಪರೀಕ್ಷಾ ಅಕ್ರಮಗಳಿಗೆ ಮುಕ್ತಾಯ ಹಾಡಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ (DC) ಸೂಚನೆ ನೀಡಲಾಗಿದೆ. ಪ್ರತಿಯೊಂದು ಇಲಾಖೆಯೂ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ, ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಣೆ ಹಾಗೂ ಸುಗಮ ಸಂಚಾರ ನಿರ್ವಹಣೆಗೆ ವಿಶೇಷ ಗಮನ ಹರಿಸಲು ನಿರ್ದೇಶಿಸಲಾಗಿದೆ.

ಸೋಶಿಯಲ್ ಮೀಡಿಯಾ ಮೇಲೆ ಸೈಬರ್ ಕ್ರೈಂ ಕಣ್ಣು

ಪ್ರಶ್ನೆಪತ್ರಿಕೆ ಸೋರಿಕೆ ವದಂತಿ ಹರಡುವವರ ಹಾಗೂ ನಕಲಿ ಜಾಲಗಳ ವಿರುದ್ಧ ಹೋರಾಡಲು ಸೈಬರ್ ಕ್ರೈಂ ಮತ್ತು ಗುಪ್ತಚರ ಇಲಾಖೆಗಳನ್ನು ಸಜ್ಜುಗೊಳಿಸಲಾಗಿದೆ. ಡಿಜಿಟಲ್ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ವಹಿಸಲಾಗುತ್ತದೆ.

ನಕಲು ಮಾಡುವುದು, ಡಿಜಿಟಲ್ ಅಕ್ರಮ ಅಥವಾ ಬೇರೆಯವರ ಬದಲಿಗೆ ಪರೀಕ್ಷೆ ಬರೆಯುವುದು ಕಂಡುಬಂದಲ್ಲಿ ‘ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ, 2023’ ರ ಅಡಿಯಲ್ಲಿ ಕಠಿಣ ಜೈಲು ಶಿಕ್ಷೆ ಮತ್ತು ಕಾನೂನು ಕ್ರಮ ಜರುಗಿಸಲಾಗುವುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !