‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ’: ಆಮ್ ಆದ್ಮಿಯಿಂದ ಚುನಾವಣಾ ಪ್ರಚಾರ ಗೀತೆ ರಿಲೀಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತನ್ನ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದೆ.

ಎಎಪಿ ಶಾಸಕ ದಿಲೀಪ್ ಪಾಂಡೆ ಬರೆದು ಹಾಡಿರುವ ‘ ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ’ (ಜೈಲಿಗೆ ಉತ್ತರ ಮತಗಳಲ್ಲಿ ನೀಡುತ್ತೇವೆ) ಗೀತೆಯನ್ನು ಎಎಪಿ ಪ್ರಧಾನ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಹಾಡಿಕೆ ‘Jail Ka Jawab Vote Se’ ಎಂಬ ಶೀರ್ಷಿಕೆ ನೀಡಲಾಗಿದೆ.

ನಮ್ಮ ಪ್ರಚಾರ ಗೀತೆಗಳು ಯಾವಾಗಲೂ ಸಾಮಾನ್ಯ ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ಈ ಹಾಡು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಹಾಡಿನ ಸಾಹಿತ್ಯವು ಇಂದಿನ ದಿನಗಳಲ್ಲಿ ಏನಾಗುತ್ತಿದೆ ಎಂಬುದರ ನೈಜತೆಯನ್ನು ಬಿಂಬಿಸುತ್ತದೆ’ ಎಂದು ಎಎಪಿ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ.

ಅಲ್ಲದೇ ಭವಿಷ್ಯದಲ್ಲಿ ಜನರು ಎದುರಿಸಬಹುದಾದ ಅಪಾಯಗಳನ್ನು ಈ ಹಾಡು ಚಿತ್ರಿಸುತ್ತದೆ ಎಂದು ಅವರು ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಪ್ರಸ್ತುತ ಅವರು ತಿಹಾರ್ ಜೈಲಿನಲ್ಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!