ಹೊಸದಿಗಂತ ಡಿಜಿಟಲ್ ಡೆಸ್ಕ್;
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟಕ್ಕಾಗಿ ಇತ್ತೀಚೆಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಇದೀಗ ದರ್ಶನ್ ಪರ ವಕೀಲ ಅರುಣ್ ಅವರು ಮನೆ ಊಟಕ್ಕೆ ಸಲ್ಲಿಸಿದ ರಿಟ್ ಅರ್ಜಿಯನ್ನು ಹಿಂಪಡೆದಿದ್ದಾರೆ.
ನಟ ದರ್ಶನ್ ಅವರಿಗೆ ಜೈಲಿನ ಊಟ ಒಗ್ಗದ ಕಾರಣದಿಂದ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಅವರು ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ತಾಂತ್ರಿಕ ಕಾರಣದಿಂದ ದರ್ಶನ್ ಪರ ವಕೀಲ ಅರುಣ್ ಅರ್ಜಿ ಹಿಂಪಡೆದಿದ್ದಾರೆ . ಹಾಗಾಗಿ ನಟ ದರ್ಶನ್ ಗೆ ಮತ್ತೆ ಜೈಲೂಟವೇ ಗತಿಯಂತಾಗಿದೆ.